ಯಕ್ಷಗಾನ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ ನಿಧನ-webnews kannada
ಯಕ್ಷಗಾನ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ ನಿಧನ-webnews kannada
![]() |
| ಯಕ್ಷಗಾನ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ ನಿಧನ-webnews kannada |
ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ (65) ಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತರಾಗಿ 4 ದಶಕಕ್ಕೂ ಹೆಚ್ಚು ಕಾಲ ಕಲಾಸೇವೆ ಸಲ್ಲಿಸಿದ್ದ ಅವರು 'ರಸರಾಗ ಚಕ್ರವರ್ತಿ' ಎಂಬ ಬಿರುದು ಹೊಂದಿದ್ದರು. ಆರಂಭದಲ್ಲಿ ಪುತ್ತೂರು ಮೇಳದಲ್ಲಿ ಚಂಡೆ & ಮದ್ದಳೆ ವಾದಕರಾಗಿ ಯಕ್ಷಗಾನ ಲೋಕಕ್ಕೆ ಕಾಲಿಟ್ಟ ಇವರು ನಂತರ ಭಾಗವತಿಕೆಯತ್ತ ಆಸಕ್ತಿ ಬೆಳೆಸಿ ಪ್ರಖ್ಯಾತ ಭಾಗವತರಾಗಿ ಹೊರಹೊಮ್ಮಿದರು.
