ಸರ್ಪ ಶಾಪ ಎಂದರೇನು ಮತ್ತು ಅದರಿಂದ ಹೇಗೆ ಮುಕ್ತಿ ಪಡೆಯಬಹುದು ಎಂಬುದರ ಕುರಿತು ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ಮಾಹಿತಿ ನೀಡಿದ್ದಾರೆ. ಸರ್ಪ ಶಾಪ ಮತ್ತು ಸರ್ಪ ದೋಷದ ನಡುವೆ ವ್ಯತ್ಯಾಸವಿದೆ ಎಂದು ಅವರು ಹೇಳಿದ್ದು, ಸರ್ಪ ಶಾಪ ವಂಶಪಾರಂಪರ್ಯವಾಗಿ ಬರುವ ಒಂದು ಅಗೋಚರ ಶಾಪವಾಗಿದೆ ಎಂದಿದ್ದಾರೆ. ಜಾತಕದಲ್ಲಿ ಲಗ್ನದಿಂದ ನವಮದಲ್ಲಿ ರಾಹು ಮತ್ತು ಮಂಗಳನ ದೃಷ್ಟಿ ಇರುವುದು ಸರ್ಪ ಶಾಪದ ಸೂಚನೆಯಾಗಿದೆ. ಈ ಶಾಪದಿಂದ ಸಂತಾನ ಸಮಸ್ಯೆಗಳು, ಮಾನಸಿಕ ಯಾತನೆ ಮತ್ತು ಕುಟುಂಬದಲ್ಲಿ ಅಶಾಂತಿ ಉಂಟಾಗಬಹುದು. ಪರಿಹಾರವಾಗಿ ನವಗ್ರಹ ಪ್ರತಿಷ್ಠಾಪನೆ, ಶಿವನಿಗೆ 108 ದಿನಗಳ ಅಭಿಷೇಕ, ನಾಗ ಪ್ರತಿಷ್ಠೆ, ಅಥವಾ ಅಂಗವಿಕಲರಿಗೆ ಸಹಾಯ ಮಾಡುವುದನ್ನು ಸೂಚಿಸಲಾಗಿದೆ. ಇವುಗಳ ಜೊತೆಗೆ, ಅನಾಥರಿಗೆ ಸೇವೆ ಸಲ್ಲಿಸುವುದರಿಂದಲೂ ಪರಿಹಾರ ಸಿಗಬಹುದು. ಎಲ್ಲವೂ ನಂಬಿಕೆಯ ಮೇಲೆ ಅವಲಂಬಿತವಾಗಿದೆ ಎಂದು ಗುರೂಜಿ ಹೇಳಿದ್ದಾರೆ.  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Live :- ವಿವಾಹ ಸಮಾರಂಭ, ಕಂಬಳ, ಜಾತ್ರೋತ್ಸವ, ನಾಟಕ, ಕ್ರೀಡೆ, ಯಕ್ಷಗಾನ, ಶಾಲಾ ಕಾಲೇಜುಗಳ ಕಾರ್ಯಕ್ರಮ, ಸಭಾ ಕಾರ್ಯಕ್ರಮ,ರಾಜಕೀಯ ಕಾರ್ಯಕ್ರಮ, ಹಾಗು ಇನ್ನಿತರ ಯಾವುದೇ ಶುಭಸಮಾರಂಭಗಳ ನೇರಪ್ರಸಾರಗಾಗಿ ಸಂಪರ್ಕಿಸಿ : 9483578321..

ಹೆಮ್ಮಾಡಿ ಜನತಾ ವಿದ್ಯಾಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭ

 ಹೆಮ್ಮಾಡಿ ಜನತಾ ವಿದ್ಯಾಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭ

ಹೆಮ್ಮಾಡಿ ಜನತಾ ವಿದ್ಯಾಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭ

 ಹೆಮ್ಮಾಡಿ:ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್, ಕಿರಿಮಂಜೇಶ್ವರ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ 14 ಮತ್ತು 17ರ ವಯೋಮಾನದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಅತ್ಯಂತ ಅದ್ದೂರಿಯಾಗಿ ಹೆಮ್ಮಾಡಿಯ ಜನತಾ ಕ್ರೀಡಾoಗಣದಲ್ಲಿ ನಡೆಯಿತು

  *ಅದ್ದೂರಿಯ ಪುರ ಮೆರವಣಿಗೆ*

 ಕ್ರೀಡಾಕೂಟದ ಅಂಗವಾಗಿ ಹೆಮ್ಮಾಡಿಯ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನದಿಂದ 2 ಕಿ ಮೀ ಅಂತರದ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನವರೆಗೆ ಪುರಮೆರವಣಿಗೆಯನ್ನು ನಡೆಸಲಾಯಿತು. ಯಕ್ಷಗಾನ, ಹುಲಿವೇಷ, ಟ್ಯಾಬ್ಲೋ ಗಳು, ಕಳಶಧಾರಿಗಳು, ಚಂಡೆ ಮತ್ತು ವಿವಿಧವಾದ್ಯವೃಂದಗಳು ಜನಮನ ಸೂರೆಗೊಂಡವು.

ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶೇಖರ ಖಾರ್ವಿ ಧ್ವಜರೋಹಣಗೈದರು. ಇದೇ ಸಂದರ್ಭದಲ್ಲಿ ಬೈಂದೂರು, ಕಾರ್ಕಳ, ಬ್ರಹ್ಮಾವರ, ಕುಂದಾಪುರ ಮತ್ತು ಉಡುಪಿ ತಾಲ್ಲೂಕಿನ ಕ್ರೀಡಾಪಟುಗಳ ಪಥ ಸಂಚಲನ ಆಕರ್ಷಕವಾಗಿದ್ದು, ಉದ್ಯಮಿಗಳಾದ ಸುರೇಶ ಕಾಂಚನ್ ಕ್ರೀಡಾಪಟುಗಳಿಂದ ಗೌರವ ರಕ್ಷೆ ಸ್ವೀಕರಿಸಿದರು. ಉಡುಪಿ ಜಿಲ್ಲಾ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ರಾಜು ಪೂಜಾರಿಯವರು ಕ್ರೀಡಾ ಜ್ಯೋತಿಯನ್ನು ಬೆಳಗಿಸಿದರು. 

ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಲೋಕೇಶ್ ಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಉತ್ತಮ ಬದುಕನ್ನು ರೂಪಿಸಿಕೊಳ್ಳಿ ಎಂದು ಶುಭ ಹಾರೈಸಿದರು.

ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರು ಮತ್ತು ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರವರು ಮಾತನಾಡಿ ಶಿಕ್ಷಣವೆಂದರೆ ಕೇವಲ ಅಂಕಗಳಿಕೆಯಲ್ಲ. ಉತ್ತಮವಾದ ಶೈಕ್ಷಣಿಕ ಸಾಧನೆಗಳೊಂದಿಗೆ ಕಲೆ, ಸಾಹಿತ್ಯ, ಸಂಸ್ಕೃತಿ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ಪರಿಣತರನ್ನಾಗಿಸುವುದೇ ನೈಜ ಶಿಕ್ಷಣವಾಗಿದೆ. ನಮ್ಮ ಸಂಸ್ಥೆಯಲ್ಲಿ ನುರಿತ ತರಬೇತುದಾರರ ಮೂಲಕ ಕ್ರೀಡಾಪಟುಗಳಿಗೆ ಅತ್ಯುನ್ನತ ತರಬೇತಿ ನೀಡಿದ್ದರ ಪ್ರತಿಫಲವಾಗಿ ನಮ್ಮ ಸಂಸ್ಥೆಯ ಐದು ವಿದ್ಯಾರ್ಥಿಗಳು ಇಂದು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ನಾವು ಪದವಿಪೂರ್ವ ಹಂತದ ಕಬ್ಬಡಿ, ಕುಸ್ತಿ ಮತ್ತು ಬಾಕ್ಸಿಂಗ್ ಪಂದ್ಯಾಟಗಳನ್ನು ಅತ್ಯಂತ ಯಶಸ್ವಿಯಾಗಿ ಸಂಘಟಿಸಿದ್ದು, ಈ ಭಾಗದ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ, ಇಲಾಖೆಯ ಮುಖ್ಯಸ್ಥರ,ನಮ್ಮ ಸಂಸ್ಥೆಯ ಬೋಧಕ- ಬೋಧಕೇತರ ವೃಂದದವರ ಸತತ ಪರಿಶ್ರಮದಿಂದಾಗಿ ಇದು ಸಾಧ್ಯವಾಗಿದೆ. ನಮ್ಮ ಗ್ರಾಮೀಣ ಭಾಗದ ಪ್ರತಿಭೆಗಳ ಪ್ರತಿಭೆಯ ಅನಾವರಣಕ್ಕೆ ನಾವು ಸದಾ ಬದ್ಧರಾಗಿದ್ದೇವೆ" ಎಂದರು.


 ಉದ್ಯಮಿ ಸುರೇಶ್ ಕಾಂಚನ್ ಮಾತನಾಡಿ " ನಮ್ಮ ಊರು ಪ್ರತಿಭೆಗಳ ತವರೂರು. ಹಿಂದೆ ಸರಿಯಾದ ಮಾರ್ಗದರ್ಶನ, ಉತ್ತೇಜನ ಹಾಗೂ ತರಬೇತಿ ಸಿಗದೆ ಅದೆಷ್ಟೋ ಪ್ರತಿಭೆಗಳು ಎಲೆ ಮರೆಯ ಕಾಯಿಯಂತಾಗಿವೆ. ಆದರೆ ಇಂದು ಜನತಾ ಸಮೂಹ ಸಂಸ್ಥೆಗಳ ಮೂಲಕ ಎಲ್ಲಾ ಪ್ರಕಾರದ ಪ್ರತಿಭೆಗಳು ಬೆಳಕಿಗೆ ಬರುತ್ತಿವೆ. ಸಹೃದಯರು, ಕ್ರೀಡಾಪ್ರೇಮಿಗಳು, ಊರಿನ ಗ್ರಾಮಸ್ಥರು ಎಲ್ಲರ ಸಹಕಾರ ದೊರೆತರೆ ನಮ್ಮ ಜಿಲ್ಲೆ ಇನ್ನಷ್ಟು ಎತ್ತರಕ್ಕೆ ಏರಲು ವಿಪುಲ ಅವಕಾಶಗಳಿವೆ " ಎಂದು ತಿಳಿಸಿದರು.

ಉಡುಪಿ ಜಿಲ್ಲಾ ಪಂಚಾಯತ್ ನ ಮಾಜಿ ಅಧ್ಯಕ್ಷರಾದ 

ರಾಜು ಪೂಜಾರಿಯವರು ಮಾತನಾಡಿ " ತನ್ನ ಸಂಸ್ಥೆಯಲ್ಲಿನ ವಿದ್ಯಾರ್ಥಿಗಳನ್ನು ದೇಶದ ಸಂಪತ್ತನ್ನಾಗಿಸಬೇಕೆಂಬ ನಿಟ್ಟಿನಲ್ಲಿ ಗಣೇಶ ಮೊಗವೀರರು ಹಗಲಿರುಳೆನ್ನದೆ ಶ್ರಮಪಡುತ್ತಿದ್ದಾರೆ. ಇಂದು ಕೆಲವು ಶಾಲೆಗಳು ವಿದ್ಯಾರ್ಥಿಗಳನ್ನು ಪರೀಕ್ಷೆಗಳಲ್ಲಿ ಉತ್ತೀರ್ಣರನ್ನಾಗಿಸುವುದಕ್ಕೆ ಪರಿತಪಿಸುತ್ತಿರುವ ಈ ಕಾಲಘಟ್ಟದಲ್ಲಿ ಶಿಕ್ಷಣದೊಂದಿಗೆ ಎಲ್ಲಾ ಕ್ಷೇತ್ರಗಳಲ್ಲೂ ವಿದ್ಯಾರ್ಥಿಗಳನ್ನು ಸಾಧಕರನ್ನಾಗಿಸುವುದು ಸಾಮಾನ್ಯ ವಿಷಯವಲ್ಲ. ಇಂತಹ ಅದ್ದೂರಿ ಕ್ರೀಡಾಕೂಟವನ್ನು ಆಯೋಜಿಸುವುದು ಕೂಡ ಸಾಮಾನ್ಯ ಮಾತಲ್ಲ, ಸಂಸ್ಥೆಯ ಎಲ್ಲಾ ಸಿಬ್ಬಂದಿಗಳ ಶ್ರಮದಿಂದ ಇದು ಸಾಧ್ಯವಾಗಿದೆ " ಎಂದರು.

 ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶೇಖರ ಖಾರ್ವಿ ಮಾತನಾಡಿ" ಉಡುಪಿ ಜಿಲ್ಲೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈಯುವುದರೊಂದಿಗೆ ಕ್ರೀಡಾ ಕ್ಷೇತ್ರದಲ್ಲಿ ಹೊಸ ಕ್ರಾಂತಿಯ ಅಲೆಯನ್ನೇ ಎಬ್ಬಿಸುತ್ತಿದೆ. ನಮ್ಮ ಜಿಲ್ಲೆಯ ಬಹಳಷ್ಟು ಕ್ರೀಡಾಪಟುಗಳು ಇಂದು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈಯುತ್ತಿದ್ದಾರೆ. ಈ ಕ್ರೀಡಾಕೂಟವು ಇಷ್ಟು ಅದ್ದೂರಿಯಾಗಿ ಆಯೋಜನೆಗೊಳ್ಳುವಲ್ಲಿ ಜನತಾ ಸಮೂಹ ಸಂಸ್ಥೆಗಳದು ಸಿಂಹಪಾಲಾಗಿದೆ. ಕಲೆ, ಸಾಹಿತ್ಯ, ಸಂಸ್ಕೃತಿ ಮತ್ತು ಕ್ರೀಡಾಕ್ಷೇತ್ರಗಳಿಗೆ ಭರಪೂರ ಉತ್ತೇಜನ ನೀಡುವ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ ಮೊಗವೀರರ ಕಾರ್ಯ ಶ್ಲಾಘನೀಯ. " ಎಂದರು.

ವೇದಿಕೆಯಲ್ಲಿ ಉಡುಪಿ ಜಿಲ್ಲೆಯ ಬೈಂದೂರು ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯ್ಕ್, , ಬೈಂದೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ವಿಜಯಕುಮಾರ ಶೆಟ್ಟಿ, ಕಾರ್ಕಳ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಚಂದ್ರ ಕಾರಂತ, ಉಡುಪಿಯ ದೈಹಿಕ ಶಿಕ್ಷಣ ಪರಿವೀಕ್ಷಕರಾದ ರವೀಂದ್ರ ನಾಯ್ಕ, ಬ್ರಹ್ಮಾವರ ದೈಹಿಕ ಶಿಕ್ಷಣ ಪರಿವೀಕ್ಷಕರಾದ ನಿತ್ಯಾನಂದ ಶೆಟ್ಟಿ, ಕುಂದಾಪುರ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸತ್ಯನಾರಾಯಣ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವಿಜಯಕುಮಾರ ಶೆಟ್ಟಿ, ಉಡುಪಿ ಜಿಲ್ಲೆ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕುಸುಮಾಕರ ಶೆಟ್ಟಿ, ಉಡುಪಿ ಜಿಲ್ಲೆ ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಿಶನ್ ರಾಜ್ ಶೆಟ್ಟಿ, ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘ ಉಡುಪಿ ವಿಭಾಗದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ, ಕರ್ನಾಟಕ ರಾಜ್ಯ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ ಉಡುಪಿ ವಿಭಾಗದ ಅಧ್ಯಕ್ಷರಾದ ಕಿರಣ್ ಹೆಗ್ಡೆ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬೈಂದೂರು ವಲಯದ ಅರುಣ್ ಕುಮಾರ್, ಬೈಂದೂರು ವಲಯ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಮಂಜುನಾಥ್ ಶೆಟ್ಟಿ, ಬೈಂದೂರು ವಲಯ ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಸತೀಶ್ ಬಾಡ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೈಂದೂರು ವಲಯದ ಅಧ್ಯಕ್ಷರಾದ ಶೇಖರ ಪೂಜಾರಿ, ಹೆಮ್ಮಾಡಿಯ ಪ್ರಗತಿ ಮಹಿಳಾ ವಿವಿದೋದ್ದೇಶ ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕರಾದ ರಾಘವೇಂದ್ರ ಕುಲಾಲ್,  

 ಬೈಂದೂರು ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಅಧ್ಯಕ್ಷರಾದ ಸುರೇಂದ್ರ ಶೆಟ್ಟಿ, ಬೈಂದೂರು ಅನುದಾನಿತ ಸಹಶಿಕ್ಷಕರ ಸಂಘದ ಅಧ್ಯಕ್ಷರಾದ ಸದಾನಂದ ಶೆಟ್ಟಿ, ಬ್ರಹ್ಮಾವರ ತಾಲ್ಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ ಹಾವಂಜೆ,

ಹೆಮ್ಮಾಡಿಯ ಹಸನ್ ಸಾಹೇಬ್, ಯಾಸಿನ್ ಹೆಮ್ಮಾಡಿ, ಜನತಾ ಪಿಯು ಕಾಲೇಜಿನ ಉಪ ಪ್ರಾಂಶುಪಾಲರಾದ ರಮೇಶ್ ಪೂಜಾರಿ ಮತ್ತು ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಉಪಸ್ಥಿತರಿದ್ದರು.

 ಉಡುಪಿ ದೈಹಿಕ ಶಿಕ್ಷಣ ಅಧಿಕಾರಿ ಚಂದ್ರಶೇಖರ ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕರಾದ ಉದಯ್ ನಾಯ್ಕ ನಿರೂಪಿಸಿದರು.ವಿವಿಧ ಸಂಸ್ಥೆಗಳ ದೈಹಿಕ ಶಿಕ್ಷಕರು,

ಜನತಾ ಸಮೂಹ ಸಂಸ್ಥೆಗಳ ಬೋಧಕ ಹಾಗೂ ಬೋಧಕೇತರ ವರ್ಗದವರು, ಊರಿನ ಕ್ರೀಡಾಭಿಮಾನಿಗಳು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು

Previous Post
No Comment
Add Comment
comment url