breaking best ಈ ಸುದ್ದಿ ಓದಿ ಕೃಷಿ ಹೊಂಡಕ್ಕೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರೋಣ ತಾಲೂಕಿನ ಹೊನ್ನಾಪೂರ ಗ್ರಾಮದಲ್ಲಿ ನಡೆದಿದೆಗದಗ: ಕೃಷಿ ಹೊಂಡಕ್ಕೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರೋಣ (Rona) ತಾಲೂಕಿನ ಹೊನ್ನಾಪೂರ ಗ್ರಾಮದಲ್ಲಿ ನಡೆದಿದೆ. ರೇಣವ್ವ ಕುರಿ 38 ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಜಮೀನಲ್ಲಿ ಹಾದು ಹಾದುಹೋಗುವ ವಿಚಾರಕ್ಕೆ ಮೈದುನನ ಕುಟುಂಬದ ಕಿರಕುಳಕ್ಕೆ ಬೇಸತ್ತು ಮಹಿಳೆ ತಮ್ಮದೇ ಜಮೀನಿನ ಕೃಷಿ ಹೊಂಡದಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ.ಮಹೇಶ್ ಕುರಿ, ರೇಣವ್ವ ಕುರಿ, ಪ್ರಕಾಶ್ ಕುರಿ ಎಂಬುವರ ವಿರುದ್ಧ ದೂರು ದಾಖಲಾಗಿದೆ. ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.- ಉಡುಪಿ: ಮಾನಸಿಕವಾಗಿ ಮನನೊಂದು ಬಾವಿಗೆ ಹಾರಿದ್ದ ವ್ಯಕ್ತಿಯನ್ನು ರಕ್ಷಿಸಿದ ಘಟನೆ ಬೈಂದೂರು ತಾಲೂಕಿನಲ್ಲಿ ನಡೆದಿದೆ. ಬೈಂದೂರು ನಿವಾಸಿ ಸತೀಶ್ ಭಂಡಾರಿ, ಬೈಂದೂರು ಜೂನಿಯರ್ ಕಾಲೇಜು ಹಿಂಭಾಗದ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷಯ ತಿಳಿದು ಕೂಡಲೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬಾವಿಗೆ ಹಾರಿದ್ದ ಸತೀಶ್ ಭಂಡಾರಿ ಅವರನ್ನು ರಕ್ಷಿಸಿದ್ದಾರೆ. ಕೋಲಾರ: ಕಾರು ಅಪಘಾತದಲ್ಲಿ ಗಾಯಗೊಂಡು ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಚಾಲಕ ವಿಮಲ್(27), ಶರೀನಾ(22) ಮೃತ ದುರ್ದೈವಿಗಳು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಸ್ನೇಹಿತರು, ಇಂದು ಮುಂಜಾನೆ ಚೈನೈ ನಿಂದ ಬಾಡಿಗೆ ಕಾರು ಮಾಡಿಕೊಂಡು ಬೆಂಗಳೂರಿಗೆ ಬರುತ್ತಿದ್ದರು. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕೋಲಾರ ತಾಲೂಕಿನ ಷಾಪೂರು ಬಳಿ ಮರಕ್ಕೆ ಕಾರು ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಹರ್ಷಿತಾ, ಡೇವಿಡ್, ವಿಮೋನಿಯಲ್, ವಿಮಲ್, ಶರೀನಾ ಗಾಯಗೊಂಡಿದ್ದರು. ಅವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಅವರಲ್ಲಿ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಹರ್ಷಿತಾ, ಡೇವಿಡ್, ವಿಮೋನಿಯಲ್ಗೆ ಚಿಕಿತ್ಸೆ ಮುಂದುವರಿದಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.